ಮನೆಯಲ್ಲೆ ಮಾಡಿ ಆಲೂ ಪಾಲಕ್ ಕಟ್ಲೆಟ್: ಮಾಡುವ ವಿಧಾನ

0 0
Read Time:1 Minute, 47 Second

ಬೇಕಾಗುವ ಪದಾರ್ಧಗಳು…

  • ಆಲೂಗಡ್ಡೆ – 2
  • ಪಾಲಕ್ ಸೊಪ್ಪು – 1 ಬಟ್ಟಲು
  • ಈರುಳ್ಳಿ – 1
  • ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
  • ಜೀರಿಗೆ – 1/4 ಚಮಚ
  • ಗರಂ ಮಸಾಲಾ – 1 ಚಮಚ
  • ಅರಿಶಿನ ಪುಡಿ – ಒಂದು ಚಿಟಿಕೆ
  • ಅಕ್ಕಿ ಹಿಟ್ಟು – 1 ಚಮಚ
  • ಮೆಣಸಿನ ಪುಡಿ – 1 ಚಮಚ
  • ಉಪ್ಪು – ರುಚಿಗೆ ತಕ್ಕಷ್ಟು
  • ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು

ಮಾಡುವ ವಿಧಾನ…

  • ಮೊದಲು ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಒಂದು ಕುಕ್ಕರ್’ಗೆ ಹಾಕಿ. ನಂತರ ನೀರು ಹಾಕಿ ಬೇಯಿಸಿಕೊಳ್ಳಿ. ನಂತರ ಅವುಗಳ ಸಿಪ್ಪೆಯನ್ನು ತೆಗೆಯಿರಿ. ಪಕ್ಕಕ್ಕೆ ಇಡಿ.
  • ಈಗ ಈರುಳ್ಳಿ ಮತ್ತು ಪಾಲಕ್ ಸೊಪ್ಪನ್ನು ತೊಳೆದು ಸಣ್ಣದಾಗಿ ಹೆಚ್ಚಿಕೊಳ್ಳಿ.
  • ಅಗಲವಾದ ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಆಲೂಗಡ್ಡೆಯನ್ನು ಹಾಕಿ ಚೆನ್ನಾಗಿ ಮ್ಯಾಶ್ ಮಾಡಿ.
  • ನಂತರ ಸಣ್ಣಗೆ ಹೆಚ್ಚಿದ ಈರುಳ್ಳಿ, ಪಾಲಕ್, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಜೀರಿಗೆ, ಗರಂ ಮಸಾಲ, ಅರಿಶಿನ ಪುಡಿ, ಮೆಣಸಿನ ಪುಡಿ, ಅಕ್ಕಿ ಹಿಟ್ಟು, ಉಪ್ಪು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.
  • ಕಟ್ಲೆಟ್‌ಗಳನ್ನು ಕರಿಯಲು ದೊಡ್ಡ ಬಾಣಲೆಯನ್ನು ಒಲೆಯ ಮೇಲೆ ಇಟ್ಟು, ಅದಕ್ಕೆ ಬೇಕಾದಷ್ಟು ಎಣ್ಣೆ ಹಾಕಿ ಕಾಯಲು ಬಿಡಿ.
  • ಎಣ್ಣೆ ಚೆನ್ನಾಗಿ ಕಾಯುತ್ತಿದ್ದಂತೆ ತಯಾರಾದ ಕಟ್ಲೆಟ್ ಮಿಶ್ರಣವನ್ನು ಬೇಕಾದ ಆಕಾರದಲ್ಲಿ ಮಾಡಿಕೊಂಡು ಎಣ್ಣೆಗೆ ಹಾಕಿ ಕಂದು ಬಣ್ಣ ಬರುವವರೆಗೆ ಕರಿಯಿರಿ. ಇದೀಗ ಬಿಸಿಬಿಸಿ ಆಲೂ ಪಾಲಕ್ ಕಟ್ಲೆಟ್ ಸವಿಯಲು ಸಿದ್ಧ.
Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *