
ವಿಟ್ಲ: ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಂಪೌಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಆ.2-2025 ರಂದು ಸಂಜೆ, KA-19-AA-0195ನೇ ನೋಂದಣಿಯ ಖಾಸಗಿ ಬಸ್ಸಿನಲ್ಲಿ ಬಂಟ್ವಾಳ, ಕನ್ಯಾನ ನಿವಾಸಿ ವೀಣಾ ಡಿಸೋಜ (42) ರವರು ಇತರ ಪ್ರಯಾಣಿಕರೊಂದಿಗೆ, ಕಲ್ಲಡ್ಕ-ಕಾಞ್ಞಂಗಾಡ್ ಅಂತರ ರಾಜ್ಯ ಹೆದ್ದಾರಿಯಲ್ಲಿ, ವಿಟ್ಲ ಖಾಸಗಿ ಬಸ್ ನಿಲ್ದಾಣ ಕಡೆಯಿಂದ ಕನ್ಯಾನ ಕಡೆಗೆ ಚಲಾಯಿಸಿಕೊಂಡು ಹೋಗಿ, ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ, ಬಸ್ ಚಾಲಕ ರಾಜೇಶ್ ಡಿಸೋಜ ಎಂಬಾತನು ಬಸ್ಸನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿದ ಪರಿಣಾಮ, ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಂಪೌಂಡಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವೀಣಾ ಡಿಸೋಜರವರು ಗಾಯಗೊಂಡಿದ್ದು, ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಬಸ್ಸಿನಲ್ಲಿದ್ದ ಇತರ 9 ಪ್ರಯಾಣಿಕರಿಗೂ ಗಾಯಗಳಾಗಿದ್ದು, ಚಿಕಿತ್ಸೆ ಬಗ್ಗೆ ವಿಟ್ಲ ಸರಕಾರಿ ಆಸ್ಪತ್ರೆಗೆ ಕಳುಹಿಸಿರುತ್ತಾರೆ. ಬಸ್ಸು ಚಾಲಕ ಮತ್ತು ಬಸ್ಸಿನ ಮೆಲ್ವಿಚಾರಕ ರವಿ ರವರಿಗೂ ಸಹ ಸಣ್ಣ ಪುಟ್ಟ ಗಾಯಗಳಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 96/2025 ಕಲಂ: 281, 125(a) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

