
Read Time:1 Minute, 6 Second
ಬೆಂಗಳೂರು: ಖಾಸಗಿ ಶಾಲೆಗಳು ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರ ಶುಲ್ಕವನ್ನು ಪಡೆಯುವ ವಿವರವನ್ನು ತಮ್ಮ ಶಾಲಾ ಜಾಲತಾಣದಲ್ಲಿ, ಶಾಲಾ ಸೂಚನಾ ಫಲಕದಲ್ಲಿ(ನೋಟೀಸ್ ಬೋರ್ಡ್) ಸಾರ್ವಜನಿಕರು ಮತ್ತು ಪೋಷಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.


ಶಾಲೆಗಳು ಶುಲ್ಕದ ವಿವರಗಳನ್ನು ಪ್ರಕಟಿಸುವುದು ಕಡ್ಡಾಯ ಎಂದು ಶಾಲಾ ಶಿಕ್ಷಣ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಶಾಲೆಗಳು ಶುಲ್ಕ ವಿವರ ಪ್ರಕಟಿಸಲು ನಿರಾಕರಿಸಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಅನೇಕ ಶಾಲೆಗಳು ಶುಲ್ಕವನ್ನು ಶೇಕಡಾ 30-40 ರಷ್ಟು ಹೆಚ್ಚಿಸಿವೆ ಎಂದು ಇಲಾಖೆಗೆ ಪೋಷಕರಿಂದ ದೂರುಗಳು ಬಂದಿದ್ದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ.

