
Read Time:1 Minute, 14 Second
ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹಿಂದುಗಳ ವಿರುದ್ಧ ನೀಡಿದ ಹೇಳಿಕೆ ಖಂಡಿಸಿ ಹಿಂದೂಪರ ಸಂಘಟನೆಗಳು ಗುಜರಾತ್ ರಾಜಧಾನಿ ಅಹಮದಾಬಾದ್ ನ ಕಾಂಗ್ರೆಸ್ ಕಚೇರಿಯ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.


ಸೋಮವಾರ ರಾತ್ರಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಮತ್ತು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಹೆಮಾಂಗ್ ರಾವಲ್ ಆರೋಪಿಸಿದ್ದಾರೆ.
ಅಹಮದಾಬಾದ್ ಪೊಲೀಸರು ಕಲ್ಲು ತೂರಾಟ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.


ಸೋಮವಾರ ಲೋಕಸಭಾ ಅಧಿವೇಶನದಲ್ಲಿ ಈಶ್ವರನ ಫೋಟೊ ಹಿಡಿದು ಭಾಷಣ ಮಾಡಿದ ರಾಹುಲ್ ಗಾಂಧಿ, ಹಿಂದುಗಳು ಅಹಿಂಸಾ ವಾದಿಗಳು. ಆದರೆ ಹಿಂಸೆಯನ್ನು ಪ್ರಚೋದಿಸುವವರು ಹಿಂದೂಗಳೇ ಅಲ್ಲ ಎಂದು ಹೇಳಿದ್ದರು. ರಾಹುಲ್ ಹೇಳಿಕೆಗೆ ಬಿಜೆಪಿ ಮುಖಂಡರು ಆಕ್ರೊಶ ವ್ಯಕ್ತಪಡಿಸಿದ್ದರು.
