ಪಿಎಸ್ ಐ ಪರಶುರಾಮ ಮನೆಯಲ್ಲಿ ಕಾಂಗ್ರೆಸ್ ಶಾಸಕನ ಲೆಟರ್ ಹೆಡ್ ಪತ್ತೆ..!

0 0
Read Time:2 Minute, 22 Second

ಯಾದಗಿರಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಗುರುವಾರ ಪೊಲೀಸ್​ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೆಸರಿನ ಲೆಟರ್​ ಹೆಡ್​ ಪತ್ತೆಯಾಗಿದೆ.

ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್​ಐ ಪೋಸ್ಟಿಂಗ್​ಗಾಗಿ ಲೆಟರ್ ಹೆಡ್ ನೀಡಿದ್ದರು. ಈ ಲೆಟರ್​ ಹೆಡ್​​ ಸಿಐಡಿ ಅಧಿಕಾರಿಗಳು ಮಹಜರು ವೇಳೆ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.

ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್​ಐ ಪೋಸ್ಟಿಂಗ್​ಗಾಗಿ ಶಾಸಕ ಚೆನ್ನಾರೆಡ್ಡಿ 15 ಲಕ್ಷ ರೂ. ಕೇಳಿದ್ದರು ಎನ್ನಲಾಗಿದೆ. ಹೀಗಾಗಿ ಪಿಎಸ್​ಐ ಪರಶುರಾಮ ಹಣ ಹೊಂದಿಸುತ್ತಿದ್ದರು. ಇದೀಗ 7.33 ಲಕ್ಷ ನಗದು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಜೊತೆಗೆ ಇಲಾಖಾ ರಿವಾಲ್ವರ್​ ಸಿಮ್​ಕಾರ್ಡ್​​, ಮೊಬೈಲ್ ಮತ್ತು ವಾಕಿಟಾಕಿ ಜಪ್ತಿ ಮಾಡಿದ್ದಾರೆ. ಪರಶುರಾಮ ಮೃತಪಟ್ಟ ಜಾಗದಲ್ಲಿ ಮುಗಿನಿಂದ ಬಾಯಿಂದ ಬಂದ ರಕ್ತದ ಮಾದರಿ ಸಹ ಸಂಗ್ರಹಿಸಲಾಗಿದೆ.

ಮೃತ ಪಿಎಸ್​ಐ ಪರಶುರಾಮ ಪ್ರತಿಯೊಂದು ಕರೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಇದೀಗ ಅವರ ಎರಡು ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದು, ಸಾಕ್ಷಿಗಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

ಈಗಾಗಲೆ ಶಾಸಕ ಚೆನ್ನಾರೆಡ್ಡಿ ವಿರುದ್ಧ ಜಾತಿ ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಪಿಎಸ್​ಐ ಪರಶುರಾಮ ಸಾವು ರಾಜ್ಯ ಸರ್ಕಾರಕ್ಕೆ ತಲೆನೋವಾಗಿದೆ. ಮತ್ತು ಪಿಎಸ್‌ಐ ಪರಶುರಾಮ ಸಾವು ಬಳಿಕ ಶಾಸಕ ಚೆನ್ನಾರೆಡ್ಡಿ ನಾಪತ್ತೆಯಾಗಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *