ಬಂಟ್ವಾಳ : ಶಾಮಿಯಾನ ಹಾಕುತಿದ್ದ ವೇಳೆ ವಿದ್ಯುತ್ ತಂತಿಗೆ ಸ್ಪರ್ಶಿಸಿ ಓರ್ವ ಸಾವು- 4 ಮಂದಿ ಆಸ್ಪತ್ರೆಗೆ ದಾಖಲು

0 0
Read Time:1 Minute, 15 Second

ಬಂಟ್ವಾಳ : ಶಾಮಿಯಾನ  ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕದ ಸಲುವಾಗಿ ಈ ಶಾಮಿಯಾನ ಹಾಕುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದಾನೆ. ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಬಂಟ್ವಾಳ ಗ್ರಾಮಾಂತರ ಠಾಣಾ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಗ್ರಾಮ ಕರಣಿಕ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸುತ್ತಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *