
Read Time:1 Minute, 17 Second
ಉಡುಪಿ: ಮಣಿಪಾಲದ ವೈದ್ಯ ವಿದ್ಯಾರ್ಥಿನಿಗೆ ಸಹಪಾಠಿ ವೈದ್ಯ ಲೈಂಗಿಕ ಕಿರುಕುಳ ನೀಡಿ ಮತಾಂತರಕ್ಕೆ ಒತ್ತಾಯಿಸಿದ್ದಾಗಿ ವೈದ್ಯ ವಿದ್ಯಾರ್ಥಿನಿಯೊಬ್ಬಳು ಉಡುಪಿ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ,ಉಡುಪಿ ಎಸ್ ಪಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು.



(ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್)
ಆರೋಪಿಗೆ ಸೂಕ್ತ ಶಿಕ್ಷೆಯನ್ನು ನೀಡಬೇಕು. ಜಿಲ್ಲೆಯಾದ್ಯಂತ ಇರುವ ಡ್ರಗ್ಸ್ ಜಾಲದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಯುವತಿ ಸಂಸದರ ಮೂಲಕ ನನ್ನನ್ನು ಸಂಪರ್ಕ ಮಾಡಿದ್ದಾಳೆ ಎಂದಿರುವ ಶಾಸಕರು, ‘ನಿಮ್ಮ ದೇವರ ಜಪವನ್ನು ಮಾಡಬಾರದು ‘ಎಂದು ಸೂಚನೆ ನೀಡಿದ್ದಾನೆ.ಮತಾಂತರ ಆಗದಿದ್ದಲ್ಲಿ ವಿಡಿಯೋ, ಫೋಟೋ ರಿಲೀಸ್ ಮಾಡುವ ಬೆದರಿಕೆ ನೀಡಿದ್ದಾನೆ. ಆದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಹೇಳಿದ್ದಾರೆ.

