
Read Time:48 Second
ಮಂಗಳೂರು: ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ. ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಮೊದಲು ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಜಿ. ಸಂತೋಷ್ ಕುಮಾರ್ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ.


ರಾಜು ಕೆ. ಅವರು ಸ್ಮಾರ್ಟ್ ಸಿಟಿ ಎಂಡಿ ಆಗಿದ್ದರು. ಉಡುಪಿ ಕಾಪು, ಬ್ರಹ್ಮಾವರ ಸಹಾಯಕ ಆಯುಕ್ತರಾಗಿ ಅವರು ಹೆಚ್ಚಿನ ಜವಾಬ್ದಾರಿ ನಿರ್ವಹಿಸಿದ್ದರು. ಮಂಗಳೂರು ಹಾಗೂ ಕುಂದಾಪುರ ಸಹಾಯಕ ಆಯುಕ್ತರಾಗಿದ್ದರು.
ಅಲ್ಲದೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಸೇರಿದಂತೆ ಇತರ ಹುದ್ದೆಗಳನ್ನೂ ನಿಭಾಯಿಸಿದ್ದಾರೆ.

