ಅತ್ಯಾಚಾರ ಆರೋಪಿ ಕಾಂಗ್ರೆಸ್ ಸಂಸದ ಬಂಧನ..!!

0 0
Read Time:1 Minute, 24 Second

 ಅತ್ಯಾಚಾರ ಪ್ರಕರಣವೊಂದರಲ್ಲಿ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಸದರು ತಮ್ಮ ಲೋಹರ್ ಬಾಗ್ ನಲ್ಲಿರುವ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ ಕೊತ್ವಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಬಂಧನದ ಬಳಿಕ ಸಂಸದರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ವೇಳೆ ಕೋರ್ಟ್ ಆವರಣದಲ್ಲಿ ಗದ್ದಲ-ಗಲಾಟೆ ನಡೆದಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿ ಸಂಸದರನ್ನು ಜೈಲಿಗೆ ಕಳುಹಿಸಿದೆ.

ಜ.17ರಂದು ಮಹಿಳೆಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಂಸದ ರಾಕೇಶ್ ರಾಥೋಡ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ನಿರೀಕ್ಷಣಾ ಜಾಮೀನಿಗಾಗಿ ಸಂಸದರು ಜಿಲ್ಲಾ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು. ಈ ಹಿನ್ನೆಲೆಯಲ್ಲಿ ಲಕ್ನೋ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಸಂಸದ ರಾಕೇಶ್ ರಾಥೋಡ್ ಬಂಧನಕ್ಕೀಡಾಗಿ ಜೈಲು ಪಾಲಾಗಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *