
Read Time:1 Minute, 7 Second
ಶ್ರೀ ರಕ್ತೇಶ್ವರಿ ಯುವಕ ಸಂಘ ನೇರಂಬೋಳು ಇದರ ವತಿಯಿಂದ ತಾರೀಕು 19/ 5/ 2024 ರಂದು ಪುಸ್ತಕ ವಿತರಣೆ ಕಾರ್ಯಕ್ರಮವು ಸಂಘದ ಸಭಾಂಗಣದಲ್ಲಿ ನಡೆಯಿತು. ಸ್ಥಳೀಯರಾದ ರಾಜೀವ ಸಾಲಿಯಾನ್ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷರಾದ ಹರೀಶ್ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮನೋಹರ್ ಕುಲಾಲ್ ನೆರಂಬೋಳು ನಿಕಟ ಪೂರ್ವ ಅಧ್ಯಕ್ಷರಾದ ಹರಿಶ್ಚಂದ್ರ ಪೂಜಾರಿ ಸಾಂಸ್ಕೃತಿಕ ಕಾರ್ಯದರ್ಶಿ ಗಣೇಶ್ ಪೂಜಾರಿ ಉಪಸ್ಥಿತರಿದ್ದರು.



ಈ ಕಾರ್ಯಕ್ರಮದಲ್ಲಿ ಸುಮಾರು 73 ಮಂದಿಗೆ ಪುಸ್ತಕ ವಿತರಣೆ ಮಾಡಲಾಯಿತು ಓರ್ವ ವಿದ್ಯಾರ್ಥಿಯ ಒಂದರಿಂದ ಹತ್ತನೇ ತರಗತಿಯ ಶಾಲೆಯ ಸಂಪೂರ್ಣ ಖರ್ಚು ವೆಚ್ಚಗಳನ್ನು ಬರಿಸಲಾಯಿತು ರವೀಂದ್ರ ಮೂಲ್ಯ ಇವರು ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.