ಮಂಗಳೂರು: ಅಪ್ರಾಪ್ತೆಯ ಅತ್ಯಾಚಾರಗೈದು ಗರ್ಭಪಾತ – ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ದಂಡ

0 0
Read Time:5 Minute, 21 Second

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆ ನಿವಾಸಿ ಕೆ ಸುಧೀರ್(27) ಶಿಕ್ಷೆಗೊಳಗಾದ ಅಪರಾಧಿ, ಸಂತ್ರಸ್ತ 13 ವರ್ಷದ ಅಪ್ರಾಪ್ತ ಬಾಲಕಿ ತನ್ನ ಮನೆಯ ಹತ್ತಿರದ ಸುಧೀರ್ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು. 2021ರ ಡಿಸೆಂಬರ್‌ನಲ್ಲಿ ಬಾಲಕಿಯು ಟಿ.ವಿ ನೋಡಲು ಹೋಗಿದ್ದಳು. ಈ ವೇಳೆ ಬಾಲಕಿಯನ್ನು ಅಂಗಡಿಗೆ ಹೋಗೋಣ ಎಂದು ಸುಧೀರ್ ತನ್ನ ಮನೆಯಿಂದ ಅನತಿ ದೂರದಲ್ಲಿರುವ ಯಾರೂ ವಾಸವಿಲ್ಲದ ಅಜ್ಜಿ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ‘ಈ ವಿಚಾರವನ್ನು ತನ್ನ ತಾಯಿಗೆ ತಿಳಿಸುತ್ತೇನೆ’ ಎಂದು ಬಾಲಕಿ ತಿಳಿಸಿದಾಗ ‘ತಾಯಿಗೆ ಹೇಳಿದರೆ ನೀನೆ ನನ್ನ ಬಳಿ ಬಂದದ್ದು ಎಂದು ಪೊಲೀಸ್ ಕಂಪ್ಲೇಟ್ ಕೊಡುತ್ತೇನೆ’ ಎಂದು ಹೇಳಿ ಹೆದರಿಸಿರುತ್ತಾನೆ. ಇದಾದ ಬಳಿಕ ಪದೇಪದೇ ತನ್ನ ಮನೆ ಹಾಗೂ ಅಜ್ಜಿ ಮನೆಯಲ್ಲಿ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಪರಿಣಾಮ ನೊಂದ ಬಾಲಕಿ 2022 ಆಗಸ್ಟ್ ತಿಂಗಳಲ್ಲಿ ಗರ್ಭಿಣಿಯಾಗಿದ್ದಾಳೆ. ಇದು ಸುಧೀರ್‌ಗೆ ತಿಳಿದು ಇನ್ನೊಂದು ಬಾರಿ ಲೈಂಗಿಕ ಸಂಪರ್ಕ ನಡೆಸಿದರೆ ಅದು ಸರಿಯಾಗುತ್ತದೆ ಎಂದು ಹೇಳಿ ಅಜ್ಜಿ ಮನೆಯಲ್ಲಿ ಮತ್ತೊಂದು ಬಾರಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಅದರ ಬಳಿಕವೂ ವಾಂತಿ ಮುಂದುವರಿದಿದ್ದರಿಂದ ಆರೋಪಿ ತನ್ನ ತಾಯಿಗೆ ತಿಳಿಸಿ ಬಾಲಕಿಗೆ ಗರ್ಭಪಾತ ಮಾಡಿಸಿದರೆ ಉತ್ತಮ ಎಂದು ಸುಧೀರ್ ಮತ್ತು ಆತನ ಮನೆಯವರು ಸೇರಿ ಚಿಕ್ಕಮಗಳೂರು ಕಡೆಗೆ ಕರೆದೊಯ್ದು ಅಲ್ಲಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಲು ಪ್ಲ್ಯಾನ್ ಮಾಡಿದ್ದಾರೆ. ಆಸ್ಪತ್ರೆಯವರಿಗೆ ಮದುವೆ ಆಗಿದ್ದು ಪತಿ-ಪತ್ನಿಯೆಂದು ಎಂದು ನಂಬಿಸಲು ಆಕೆಗೆ ಕಾಲುಂಗುರ, ಕರಿಮಣಿ ಸರ ಹಾಕಿಸಿ ಮದುಮಗಳಂತೆ ಅಲಂಕಾರ ಮಾಡಿಸಿ ಆರೋಪಿಯೊಂದಿಗೆ ಫೋಟೋ ತೆಗೆಸಿದ್ದಾರೆ. ಬಳಿಕ ಬಾಲಕಿಯ ತಾಯಿಗೆ ಮದುವೆಗೆ ಕರೆದೊಯ್ಯುತ್ತೇವೆ ಎಂದು ಸಂತ್ರಸ್ತ ಬಾಲಕಿಯನ್ನು 2022ರ ಡಿಸೆಂಬರ್ 17ರಂದು ಚಿಕ್ಕಮಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ‌. ಅಲ್ಲಿ ಬಾಲಕಿಯನ್ನು ತನ್ನ ಪತ್ನಿ ಎಂದು ನಂಬಿಸಿದ ಸುಧೀರ್ ವೈದ್ಯರಿಂದ ಬಾಲಕಿಗೆ ಗರ್ಭಪಾತ ಮಾಡಿಸಿರುತ್ತಾನೆ. ಆ ಬಳಿಕ ವಿಚಾರ ತಿಳಿದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯನ್ವಯ ಪ್ರಕರಣವು ದಾಖಲಾಗಿತ್ತು. ಆಗಿನ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ಸತ್ಯನಾರಾಯಣ ಕೆ. ತನಿಖೆ ಪೂರ್ಣಗೊಳಿಸಿ ಆರೋಪಿತರ ವಿರುದ್ಧ ದೋಷಾರೋಪಣೆ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಪ್ರಕರಣದ ಬಗ್ಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಪ್ರಕರಣದಲ್ಲಿ ಅಭಿಯೋಜನೆ ಪರ ಒಟ್ಟು 24 ಸಾಕ್ಷಿದಾರರನ್ನು ವಿಚಾರಿಸಲಾಗಿರುತ್ತದೆ. 62 ದಾಖಲೆಗಳನ್ನು ಗುರುತಿಸಲಾಗಿರುತ್ತದೆ. ಈ ಪ್ರಕರಣದ ಸಾಕ್ಷ್ಯ, ದಾಖಲೆಗಳು ಹಾಗೂ ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿ ಸುಧೀರ್ ವಿರುದ್ಧ ಅಪರಾಧವು ಸಾಬೀತಾಗಿದೆ ಎಂದು ತೀರ್ಮಾನಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಮಾನು ಕೆ. ಎಸ್. ರವರು ಅತ್ಯಾಚಾರ ಮಾಡಿದ ಅಪರಾಧಕ್ಕೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 40,000 ರೂ. ದಂಡ, ಸಾಕ್ಷ್ಯನಾಶ ಮಾಡಿದ ಅಪರಾಧಕ್ಕೆ 3 ವರ್ಷಗಳ ಸಾದಾ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿರುತ್ತದೆ, ದಂಡದ ಹಣ 50,000 ರೂ.ವನ್ನು ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯವು ಆದೇಶಿಸಿರುತ್ತದೆ. ಅಲ್ಲದೆ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 2,00,000 ರೂ. ಹಣದ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ತೀರ್ಪಿನಲ್ಲಿ ನಿರ್ದೇಶಿಸಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸ್ಪೆಶಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ ಬದರಿನಾಥ ನಾಯರಿ ವಾದ ಮಂಡಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *