
Read Time:1 Minute, 11 Second
ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿದ ಅರ್ಜಿ ವಜಾಗೊಂಡ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕೆಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಕರೆ ನೀಡಿದ್ದಾರೆ.


ಹೈಕೋರ್ಟಿನ ತೀರ್ಪು ಸ್ವಾಗತಾರ್ಹ. ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರ ಅರ್ಜಿಯನ್ನು ವಜಾ ಮಾಡುವ ಮೂಲಕ ಹೈಕೋರ್ಟ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

