
Read Time:50 Second
ಮಂಗಳೂರು : ಅಂತಾರಾಜ್ಯ ಕಳ್ಳನನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಬಂಧಿತನಿಂದ ಬರೋಬ್ಬರಿ 21 ಲಕ್ಷ ಮೌಲ್ಯದ ಸೊತ್ತು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಸೂರಜ್ (36) ಬಂಧಿತ ಆರೋಪಿ. ವಿಶೇಷವೆಂದರೆ ಹಾಡಹಗಲೇ ಈತ ಕಳ್ಳತನ ಮಾಡುತ್ತಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ಈತ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಬಂಧಿತನಿಂದ 18 ಲಕ್ಷ ಮೌಲ್ಯದ 200 ಗ್ರಾಂ ಚಿನ್ನ, ಕೃತ್ಯಕ್ಕೆ ಬಳಸುತ್ತಿದ್ದ ಆಲ್ಟೋ ಕಾರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

