
Read Time:1 Minute, 8 Second
ವಿಟ್ಲ ಪೇಟೆಯಲ್ಲಿ ವ್ಯಕ್ತಿಯೊಬ್ಬರಿಗೆ ಮೆಣಸಿನಪುಡಿ ಎರಚಿ ದರೋಡೆ ನಡೆಸಿರುವ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.


ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಕೂಳೂರು ಗ್ರಾಮದ ಅಶ್ರಫ್(32) ಬಂಧಿತ ಆರೋಪಿ. 2015ರಲ್ಲಿ ವಿಟ್ಲಪೇಟೆಯಲ್ಲಿ ಜಗದೀಶ್ ಕಾಮತ್ ಎಂಬವರಿಗೆ ಮೆಣಸಿನ ಪುಡಿ ಎರಚಿ ದರೋಡೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಆದರೆ ಆರೋಪಿ ತಲೆಮರೆಸಿಕೊಂಡಿದ್ದು, ವಾರಂಟ್ ಜಾರಿಯಾಗಿತ್ತು. ಅಲ್ಲದೇ ಈತ ವಿಟ್ಲಪೇಟೆಯ ಕೊಲ್ನಾಡು ಗ್ರಾಮದ ವೈನ್ ಶಾಪ್‌ವೊಂದರ ಬಾಗಿಲು ಮುರಿದು ಕಳ್ಳತನ ನಡೆಸಿರುವ ಬಗ್ಗೆಯೂ ಪ್ರಕರಣ ದಾಖಲಾಗಿತ್ತು.


ಈ ಎರಡೂ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿ ಅಶ್ರಫ್‌ನನ್ನು ಕೂಳೂರು ಮಂಜೇಶ್ವರ ಎಂಬಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.
