
Read Time:55 Second
ಯೂಟ್ಯೂಬರ್ ಸಮೀರ್.ಎಂ.ಡಿ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬ0ಧಿಸಿದ0ತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸಿಬ್ಬಂದಿ ಜೊತೆಗೆ ಸೆ.4 ರಂದು ಮಧ್ಯಾಹ್ನ ಬೆಂಗಳೂರಿನ ಬನ್ನೇರುಘಟ್ಟದ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.


ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದುಕೊಂಡು ಪೊಲೀಸರು ಬೆಂಗಳೂರಿಗೆ ತೆರಳಿದ್ದು, ಪ್ರಕರಣಕ್ಕೆ ಸಂಬ0ಧಿಸಿದ0ತೆ ಆತನ ಮನೆಯಿಂದ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಜಪ್ತಿ ಮಾಡಿ ತನಿಖೆ ನಡೆಸಿದ್ದಾರೆ.