ದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆ

0 0
Read Time:2 Minute, 10 Second

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಪೂರೈಸಲು ಮರಳು ಉಸ್ತುವಾರಿಯ ಜಿಲ್ಲಾ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ.

ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿ ರುವ DK SAND BAZAAR APPನಲ್ಲಿ ನೋಂದಾಯಿಸಬಹುದು.

15 ಮರಳು ಬ್ಲಾಕ್‌ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ ವರ್ಷ ಜೂನ್‌ 5ರಿಂದ ಅಕ್ಟೋಬರ್ 15ರವರೆಗೆ ಮರಳು ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳು ಗಣಿಗಾರಿಕೆ ನಿಷೇಧವಿರುತ್ತದೆ. ಅದರಂತೆ ಜಿಲ್ಲೆಯಲ್ಲಿ ಗಣಿ ಗುತ್ತಿಗೆ ಪ್ರದೇಶದಲ್ಲಿ ಮರಳುಗಾರಿಕೆ ನಿಷೇಧವಿರುತ್ತದೆ. ಮರಳು ದಾಸ್ತಾನು ಕೇಂದ್ರಗಳಲ್ಲಿ ಲಭ್ಯವಿರುವ ಒಟ್ಟು 27,550 ಮೆ.ಟನ್‌ಗಳಲ್ಲಿ ಮಾರ್ಚ್ 2025ರಿಂದ ಇಲ್ಲಿಯವರೆಗೆ 12,126 ಮೆ.ಟನ್ ಅನ್ನು ಬುಕಿಂಗ್ ಆಪ್ ಮುಖಾಂತರ ವಿತರಿಸಲಾಗಿದೆ.

ಮರಳು ಗಣಿ ಗುತ್ತಿಗೆ ದಾಸ್ತಾನು ಕೇಂದ್ರದಲ್ಲಿ ಲಭ್ಯವಿರುವ 15,424 ಮೆ.ಟನ್ ಮರಳನ್ನು dksandbazaar.com ವೆಬ್‌ಸೈಟ್‌ನಲ್ಲಿ ಬುಕ್ ಮಾಡಿಕೊಳ್ಳಬಹುದಾಗಿದೆ. ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗೆ ಮತ್ತು ಡಿಕೆ ಸ್ಯಾಂಡ್ ಬಝಾರ್ ಬುಕಿಂಗ್‌ನಲ್ಲಿ ಯಾವುದೇ ತಾಂತ್ರಿಕ ತೊಂದರೆಯಿದ್ದಲ್ಲಿ ಗಣಿ ಮತ್ತು ಭೂಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿಯ ಕಚೇರಿ (ದೂ.ಸಂ: 0824-2429932/6364019555)ಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಭೂವಿಜ್ಞಾನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *