ಹಿಂದೂ ಯುವತಿಯರು, ಭಜನೆ ಬಗ್ಗೆ ಅವಹೇಳನ, ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

0 0
Read Time:1 Minute, 24 Second

ಪುತ್ತೂರು : ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪಂಜ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಅ. 18ರಂದು ಪ್ರತಿಭಟನೆ ನಡೆಸಿದ್ದು, ಇದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಪುತ್ತೂರಿನಲ್ಲಿ ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಆರೋಪಿತ ಸಂಜೀವ ಪೂಜಾರಿಯನ್ನು ಸಂಜೆಯೊಳಗೆ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ಇದರ ಬೆನ್ನಲ್ಲೇ ಆರೋಪಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.

ಬಿಲ್ಲವ ಸಮಾಜದ ಒಂದು ಲಕ್ಷ ಯುವತಿಯರು ಸೂಳೆಯರಿದ್ದಾರೆ, ಇದಕ್ಕೆ ತನ್ನಲ್ಲಿ ಹತ್ತು ಸಾವಿರದಷ್ಟು ದಾಖಲೆ ಇದೆ ಎಂದು ಮಾತನಾಡಿದ್ದ ಸಂಜೀವ ಪೂಜಾರಿಯವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಮತ್ತು ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *