
Read Time:58 Second
ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಪ್ರಥಮ ಸ್ಥಾನದೊಂದಿಗೆ ಸ್ವರ್ಣಪದಕ ಮತ್ತು ಪ್ರಮಾಣ ಪತ್ರ ಪಡೆದಿರುತ್ತಾರೆ.


ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ರ್ಟಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ರಾಜ್ಯಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿ ಹಾಗೂ ಅಶೋಕ್ ಆಚಾರ್ಯ ಬಂಟ್ವಾಳ ಅವರ ಶಿಷ್ಯೆ.

