
Read Time:1 Minute, 15 Second
ಮಂಗಳೂರು: ಆಟೋ ಚಾಲಕನ ಮೇಲೆ ಭಾನುವಾರ ರಾತ್ರಿ ನಗರದ ಫಳ್ನೀರ್ ನಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂಬುದು ಸುಳ್ಳು. ಇದು ಆಟೊ ಚಾಲಕನೇ ಸೃಷ್ಟಿಸಿದ ಕಟ್ಟು ಕಥೆ ಎಂಬ ವಿಚಾರ ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.


ರಿಕ್ಷಾ ಚಾಲಕ ಬಶೀರ್ ಎಂಬಾತ ಪೊಲೀಸರಿಗೆ ಮಾಹಿತಿ ನೀಡುತ್ತೇನೆ ಎಂಬ ಆರೋಪದಲ್ಲಿ ಅಪರಿಚಿತ ತಂಡವೊಂದು ತನ್ನ ಹಲ್ಲೆ ನಡೆಸಿರುವುದಾಗಿ ಪೊಲೀಸ್ ದೂರು ನೀಡಿದ್ದನು.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ ಅಲ್ಲಿ ಅಂತಹ ಘಟನೆ ನಡೆದಿಲ್ಲ. ಚಾಲಕನೇ ಸಾರ್ವಜನಿಕರ ಗಮನ ಸೆಳೆಯಲು ಈ ಕೃತ್ಯ ನಡೆಸಿರುವುದಾಗಿ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.


ರಿಕ್ಷಾ ಚಾಲಕನು ಯಾವುದೊ ಹರಿತವಾದ ವಸ್ತುವಿನಿಂದ ಅಥವಾ ಪೆನ್ ನಿಂದ ತನ್ನ ದೇಹಕ್ಕೆ ಚುಚ್ಚಿ ಕೊಂಡು ಹಲ್ಲೆ ಪ್ರಕರಣವನ್ನು ಸೃಷ್ಟಿಸಿರುವುದಾಗಿ ಪೊಲೀಸರು ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
