ಮಂಗಳೂರು: ಮಕ್ಕಳನ್ನು ಮಾರಾಟ ಹಾಗೂ ಕೊಳ್ಳುವವರಿಗೆ ಜೈಲು ಶಿಕ್ಷೆ…!

0 0
Read Time:1 Minute, 25 Second

ಮಂಗಳೂರು:  ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015ರ ಸೆಕ್ಷನ್‌ 80 ಮತ್ತು 81ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣ ಘಟಕ ಎಚ್ಚರಿಕೆ ನೀಡಿದೆ.

ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ ರಕ್ಷಣ ಘಟಕ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನವೆಂಬರ್‌ ತಿಂಗಳಲ್ಲಿ ಕಾನೂನುಬದ್ಧ ದತ್ತು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ದತ್ತು ಮಾಸಾಚರಣೆ ಆಚರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿ ಕಂಡು ಬಂದಲ್ಲಿ ಮಕ್ಕಳ ರಕ್ಷಣ ಘಟಕ ಕಚೇರಿಯ ದೂರವಾಣಿ ಸಂಖ್ಯೆ 0824-2440004 ಅಥವಾ ಮಕ್ಕಳ ಸಹಾಯವಾಣಿ 1098 ಅಥವಾ 112ಕ್ಕೆ ಮಾಹಿತಿ ನೀಡಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *