
Read Time:59 Second
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ನ ಹಲವಡೆ ಭೂಕುಸಿತ ಉಂಟಾಗಿದೆ.


ರಾಷ್ಟ್ರೀಯ ಹೆದ್ದಾರಿಯ 75 ರ ಚತುಷ್ಪತ ರಸ್ತೆಯ ಹಲವು ಕಡೆ ಭೂಕುಸಿತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ರಾಜ್ಯದಲ್ಲಿ ಇನ್ನೂ 6 ದಿನ ಮುಂಗಾರು ಮಳೆಯ ಆರ್ಭಟ


ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಾಳಿ ಸಹಿತ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಉಳಿದಂತೆ ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸದ್ದು, ಈ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಹೆಚ್ಚಿರಲಿದೆ.
