ರಾಜ್ಯ ಸರ್ಕಾರದಿಂದ ಟ್ರಕ್ಕಿಂಗ್‌ ಪ್ರಿಯರಿಗೆ ಶಾಕ್‌ : ಪ್ರಸಿದ್ಧ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ʻಟ್ರಿಕ್ಕಿಂಗ್‌ʼ ನಿಷೇಧ

0 0
Read Time:1 Minute, 38 Second

ಚಿಕ್ಕಮಗಳೂರು : ಟ್ರಕ್ಕಿಂಗ್‌ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ನೀಡಿದ್ದು, ಪ್ರಸಿದ್ಧ ಪ್ರವಾಸಿತಾಣಗಳಾದ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಎತ್ತಿನಭುಜ ಪ್ರದೇಶಗಳಲ್ಲಿ ಟ್ರಕ್ಕಿಂಗ್‌ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತವಾಗಿ ಟ್ರೆಕ್ಕಿಂಗ್‌ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುನ್ನೆಚ್ಚರಿಕೆಯಿಂದ ಟ್ರಕ್ಕಿಂಗ್ ಹೋಗುವ ಮರ್ಗದಲ್ಲಿ ಪ್ರವಾಸಿಗರ ಸುರಕ್ಷತಾ ಕಾಮಗಾರಿಗೆ ಇಲಾಖೆ ಮುಂದಾಗಿದೆ. ಕಾಮಗಾರಿ ಅನುಷ್ಠಾನಗೊಳ್ಳಲಿರುವ ಕಾರಣ ಎತ್ತಿನ ಭುಜಕ್ಕೆ ಮುಂದಿನ ಆದೇಶದವರೆಗೂ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.

ಜನರ ಸುರಕ್ಷತೆಗಾಗಿ ಕೆಲವು ಪ್ರವಾಸಿ ತಾಣಗಳಿಗೆ ಆನ್ಲೈನ್ ಟಿಕೆಟ್ ಮೂಲಕ ಪ್ರವಾಸಿಗರು ಹೋಗಬೇಕೆಂಬ ನಿಯಮವನ್ನು ಸರ್ಕಾರ ಜಾರಿ ಮಾಡಿದೆ. ಆದರೂ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜನಜಂಗುಳಿ ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದೆ. ಇದರಿಂದ ಅರಣ್ಯ ಇಲಾಖೆ ಮುಂಜಾಗೃತ ಕ್ರಮವಾಗಿ ಈ ನಿರ್ಬಂಧ ವಿಧಿಸಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *