ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

0 0
Read Time:2 Minute, 58 Second

ಮೈಸೂರಿನ ಮುಡಾ ಹಗರಣದಡಿ ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಮುಖ್ಯಮಂತ್ರಿಗಳ ಕುಟುಂಬ ಅಕ್ರಮವಾಗಿ ಪಡೆದುಕೊಂಡಿತ್ತು. ನಿವೇಶನಗಳನ್ನು ಹಿಂತಿರುಗಿಸಿದರೂ ತಪ್ಪು ತಪ್ಪೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ನೀಡಿದರು. ಅಪರಾಧ ಅಪರಾಧವೇ; ನಿವೇಶನ ಹಿಂತಿರುಗಿಸಿದ ಮಾತ್ರಕ್ಕೆ ಕಳಂಕದಿಂದ ಹೊರಕ್ಕೆ ಬರಲು ಸಾಧ್ಯವಿಲ್ಲ. ಇವತ್ತು ಸ್ನೇಹಮಯಿ ಕೃಷ್ಣರ ಮೇಲೆ ಬೆದರಿಕೆ ಹಾಕಿ ಕೇಸುಗಳನ್ನು ಹಾಕುತ್ತಿದ್ದಾರೆ. ಇವೆಲ್ಲ ಷಡ್ಯಂತ್ರ, ಪಿತೂರಿ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು.

ಸ್ನೇಹಮಯಿ ಕೃಷ್ಣ ನ್ಯಾಯಪರ ಹೋರಾಟ ಕೈಬಿಟ್ಟಿಲ್ಲ; ಅವರನ್ನು ಅಭಿನಂದಿಸುವೆ ಎಂದ ಅವರು, ಸ್ನೇಹಮಯಿ ಕೃಷ್ಣ ಅವರ ಕೋರಿಕೆಯಂತೆ ಹೈಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವುದೆಂಬ ವಿಶ್ವಾಸ ಇರುವುದಾಗಿ ಹೇಳಿದರು. 14 ನಿವೇಶನವಷ್ಟೇ ಅಲ್ಲ; ಇದರಲ್ಲಿ ಸುಮಾರು 5 ಸಾವಿರ ಕೋಟಿಗೂ ಹೆಚ್ಚಿನ ಹಗರಣ ನಡೆದಿದೆ. ಸಿದ್ದರಾಮಯ್ಯನವರು, ಕಾಂಗ್ರೆಸ್ ಸರಕಾರ ಬಂದಾಗಿನಿಂದ ಸಾವಿರಾರು ನಿವೇಶನಗಳನ್ನು ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೆ ಮಾರಿಕೊಂಡಿದ್ದಾರೆ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಮುಡಾ ಹಗರಣ ವಿಷಯದಲ್ಲಿ ಬಿಜೆಪಿ ನಿರಂತರ ಹೋರಾಟ ಮಾಡುತ್ತ ಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯನ್ನೂ ನಾವು ಮಾಡಿದ್ದೆವು ಎಂದು ವಿವರಿಸಿದರು.

ಅಕ್ರಮವೇ ನಡೆದಿಲ್ಲ ಎಂದಿದ್ದ ಸಿದ್ದರಾಮಯ್ಯನವರು, ಪರಿಹಾರ ಕೊಟ್ಟರೆ ನಿವೇಶನ ವಾಪಸ್ ಕೊಡುವುದಾಗಿ ಹೇಳಿದ್ದರು. ಬಳಿಕ ಯಾವುದೇ ಪರಿಹಾರವನ್ನೂ ಅಪೇಕ್ಷಿಸದೆ 14 ನಿವೇಶನಗಳನ್ನು ಮುಡಾಗೆ ಬರೆದುಕೊಡುವ ಕೆಲಸ ಮಾಡಿದ್ದಾರೆ. ಅಕ್ರಮ ನಡೆದುದು ಮುಖ್ಯಮಂತ್ರಿ ಕುರ್ಚಿಗೆ ಕಂಟಕವಾಗಿದೆ ಎಂಬುದು ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರಿಗೆ ಅರ್ಥವಾಗಿದೆ. ಬಳಿಕ ಆ ನಿರ್ಧಾರವನ್ನು ಸಿದ್ದರಾಮಯ್ಯನವರು ಕೈಗೊಂಡರು ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಒಳಜಗಳ ಕುರಿತ ಪ್ರಶ್ನೆಗೆ ಉತ್ತರ ನೀಡಿದ ಅವರು, ಯಾವುದೇ ಪ್ಯಾಚಪ್ ಆಗಲು ಸಾಧ್ಯವಿಲ್ಲ; ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಅವರು ಏನೇ ಪ್ರಯತ್ನ ಮಾಡಿದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕಾಗುತ್ತದೆ ಎಂದು ತಿಳಿಸಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *