
Read Time:42 Second
ಕಡಬ : ಯುವಕನೋರ್ವನು ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ನಡೆದಿದೆ. ಮೀನಾಡಿ ಸಮೀಪದ ದೋಳ ನಿವಾಸಿ ಉಮೇಶ (35) ಮೃತಪಟ್ಟ ಯುವಕ. ಉಮೇಶ ಅವರು ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಹಳ್ಳದಲ್ಲಿ ರಭಸದಿಂದ ನೀರು ಹರಿಯುತ್ತಿದ್ದ ಹಿನ್ನೆಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಉಮೇಶರ ಮೃತದೇಹ ಪೇರಡ್ಕ ಸೇತುವೆ ಬಳಿ ಪತ್ತೆಯಾಗಿದೆ. ಈ ಬಗ್ಗೆ ಕಡಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




