ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್..!

0 0
Read Time:1 Minute, 21 Second

ಬೆಂಗಳೂರು: ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ವಿವಾದಕ್ಕೆ ಸಿಲುಕಿದ್ದಂತ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ್ದಾರೆ.

ಬೆಂಗಳೂರಿನ ಸಂಗೀತ ಕಾರ್ಯಕ್ರಮ ನಡೆಸುವಾಗ ಖ್ಯಾತ ಗಾಯಕ ಸೋನು ನಿಗಮ್ ಅವರು ಹೇಳಿದ್ದಂತ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಈ ಹಿನ್ನಲೆಯಲ್ಲಿ ಅವರ ವಿರುದ್ದ ಎಫ್‌ಐಆರ್ ಕೂಡ ದಾಖಲಾಗಿತ್ತು. ಇಂದು ಕನ್ನಡ ಚಿತ್ರರಂಗದಿಂದ ಅವರನ್ನು ಬ್ಯಾನ್ ಕೂಡ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.

ಈ ಎಲ್ಲಾ ಬೆಳವಣಿಗೆಯ ನಂತ್ರ ಕೊನೆಗೂ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಈ ಸಂಬಂಧ ತಮ್ಮ ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕ್ಷಮೆ ಇರಲಿ ಕರ್ನಾಟಕ. ನಿಮ್ಮ ಮೇಲೆ ನನಗೆ ಇರುವ ಪ್ರೀತಿ ನನ್ನ ಅಹಂಕಾರಕ್ಕಿಂತಲೂ ದೊಡ್ಡದು. ನಿಮ್ಮನ್ನು ಯಾವಾಗಲೂ ಪ್ರೀತಿಸುತ್ತೇನೆ ಎಂಬುದಾಗಿ ಹೇಳಿದ್ದಾರೆ. ಈ ಮೂಲಕ ಕನ್ನಡಿಗರ ಕ್ಷಮೆಯನ್ನು ಗಾಯಕ ಸೋನು ನಿಗಮ್ ಕೇಳಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *