ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪ್ರಸಾರ – ಪ್ರಕರಣ ದಾಖಲು

0 0
Read Time:2 Minute, 6 Second

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಯುವಕರ ಮೇಲೆ ದಾಳಿಗೆ ಯತ್ನ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನಾಂಕ 21.06.2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ:73/2025 ಕಲಂ: 125 ಬಿ ಎನ್ ಎಸ್ ಪ್ರಕರಣದ ಘಟನೆಗೆ ಸಂಬಂಧಿಸಿದಂತೆ, “ಮುಸ್ಲಿಂ ಯುವ ಬಳಗ” ಎಂಬ ಹೆಸರಿನ ವಾಟ್ಸಾಪ್ ಗ್ರೂಪಿನಲ್ಲಿ Ziyad Ummi ಎಂಬ ಹೆಸರಿನ ವ್ಯಕ್ತಿಯೋರ್ವ “ಸಜಿಪ ದೇರಾಜೆ ರಸ್ತೆಯ ಮಧ್ಯೆ ಯುವಕರಿಬ್ಬರ ಮೇಲೆ ದಾಳಿಗೆ ಯತ್ನ, ಘಟನಾ ಸ್ಥಳದಲ್ಲಿ ಸೇರಿದ ಜನರಿಂದ ಆಕ್ರೋಶ” ಎಂಬುದಾಗಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿ ಸಾರ್ವಜನಿಕರಿಗೆ ಭಯ ಬೀತಿಯನ್ನುಂಟು ಮಾಡಿದ ಹಿನ್ನೆಲೆಯಲ್ಲಿ, Ziyad Ummi ಎಂಬ ಹೆಸರಿನಲ್ಲಿ ಸಂದೇಶ ಪ್ರಸಾರ ಮಾಡಿದ ವ್ಯಕ್ತಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬ್ರ : 74/2025, ಕಲಂ: 240 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

ಸದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ, “ತಲವಾರು ದಾಳಿ” ಎಂಬುದಾಗಿ ಸೋಶಿಯಲ್ ಮಿಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ದೇರಾಜೆ ಬಸ್ಸು ನಿಲ್ದಾಣದ ಬಳಿ ಸುಮಾರು 50 ರಿಂದ 75 ಜನರ ಅಕ್ರಮ ಕೂಟವನ್ನು ಸೇರಿಸಿ, ರಸ್ತೆ ಸಂಚಾರಕ್ಕೆ ಅಡ್ಡಿಯಾಗುವಂತೆ ಮಾಡಿದ ವ್ಯಕ್ತಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ 77/2025 ಕಲಂ 240, 285, 189(2), 191(2), 190 ಬಿ.ಎನ್. ಎಸ್ ಕಾಯಿದೆಯಂತೆ ಪ್ರಕರಣ ದಾಖಲಾಗಿರುತ್ತದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *