
Read Time:48 Second
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅನಾರೋಗ್ಯದಿಂದ ಜೂನ್ 30 ರಂದು ನಿಧನರಾದರು. ಕೋಟತಟ್ಟು ನಿವಾಸಿಯಾಗಿದ್ದ ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರಿಗೆ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಸುನೀಲ್ ಕುಮಾರ್, ಉದ್ಯಮಿ ಆನಂದ ಸಿ.ಕುಂದರ್ ಸಹಿತ ಉಡುಪಿ, ದಕ್ಷಿಣ ಕನ್ನಡದ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

