ವಿದ್ಯಾರ್ಥಿಗಳೇ ಗಮನಿಸಿ : SSLC, ದ್ವಿತೀಯ PUC ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ 

0 0
Read Time:1 Minute, 55 Second

ಬೆಂಗಳೂರು: 2026ರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಈ ಕುರಿತಂತೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ.

ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ.

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ. ದಿನಾಂಕ 20-09-2025ರಂದು ಪ್ರಕಟಿಸಿರುವಂತ ಈ ತಾತ್ಕಾಲಿಕ ವೇಳಾಪಟ್ಟಿಗೆ ದಿನಾಂಕ 20-09-2025ರಿಂದ 09-10-2025ರೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಆಕ್ಷೇಪಣೆಗಳನ್ನು [email protected] ಗೆ ಕಳುಹಿಸುವಂತೆ ಮಂಡಳಿಯು ಸೂಚಿಸಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *