
Read Time:1 Minute, 14 Second
ಬೆಳ್ತಂಗಡಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದಾಗಿ ನಂಬಿಸಿ ಬೆಳ್ತಂಗಡಿಯ ವ್ಯಕ್ತಿಯೊಬ್ಬರಿಂದ ವಂಚಕರು 3,30,000 ರೂ. ವಂಚಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ಸ್ಟಗ್ರಾಮ್ನಲ್ಲಿ ಬಂದ ಲಿಂಕ್ ಮೂಲಕ ವಾಟ್ಸ್ ಆ್ಯಪ್ ಗ್ರೂಪಿಗೆ ಸೇರಿದ ವ್ಯಕ್ತಿಗೆ ಅಲ್ಲಿ ಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ಅವರು ಕಳುಹಿಸಿದ ಲಿಂಕ್ ಮುಖಾಂತರ ಎ.ಸಿ.ಮಾಕ್ಸ್ JOHCM ಎಂಬ ಎರಡು ಆಪ್ ಗಳನ್ನು ಡೌನ್ಲೋಡ್ ಮಾಡಿದ್ದಾರೆ. ಬಳಿಕ ಈ ಆಪ್ಗಳ ಮೂಲಕ ದೂರುದಾರರ ಖಾತೆಯಿಂದ ಅವರು ಹೇಳಿದ ವಿವಿಧ ಖಾತೆಗಳಿಗೆ 3,30,000 ರೂ. ವರ್ಗಾಯಿಸಿದ್ದಾರೆ ಎಂದು ದೂರಲಾಗಿದೆ. ಬಳಿಕ ಸಂಪರ್ಕಕ್ಕೆ ಸಿಗದಿದ್ದು, ಮೋಸ ಹೋಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ಬಗ್ಗೆ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

