
Read Time:1 Minute, 8 Second
ಅನ್ಯಾನ್ಯ ಭಟ್ ನಾಪತ್ತೆ ಪ್ರಕರಣ ಸಂಬಂಧ ಇಂದು ಬೆಳ್ಳಂಬೆಳಗ್ಗೆ ಸುಜಾತ್ ಭಟ್ ಅವರು ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ್ದಾರೆ.


ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿದ್ದು, ಇದೀಗ ಸುಜಾತಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ.
ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿಯಿಂದ ಸುಜಾತ್ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ವಿವರ ನೀಡುವಂತೆ ಸುಜಾತ್ ಭಟ್ ಗೆ ಎಸ್ ಐಟಿ ನೋಟಿಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 5 ಗಂಟೆಗೆ ಬೆಂಗಳೂರಿನಿಂದ ಬೆಳ್ತಂಗಡಿಯ ಎಸ್ ಐಟಿ ವಿಚಾರಣೆಗೆ ಆಗಮಿಸಿದ್ದಾರೆ

