
Read Time:1 Minute, 14 Second
ಬೆಂಗಳೂರು: ಅನನ್ಯ ಭಟ್ ನಾಪತ್ತೆಯಾಗಿದ್ದರ ಬಗ್ಗೆ ಅವರ ತಾಯಿ ಸುಜಾತಾ ಭಟ್ ಆರೋಪಿಸಿದ್ದರು. ತಮ್ಮ ಮಗಳ ಅಸ್ಥಿ ಪಂಜರ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಅನನ್ಯ ಭಟ್ ನಾಪತ್ತೆ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರಿಸಿದ್ದು, ಇದೀಗ ಸುಜಾತಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ.


ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿಯಿಂದ ಸುಜಾತ್ ಭಟ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣದ ವಿವರ ನೀಡುವಂತೆ ಸುಜಾತ್ ಭಟ್ ಗೆ ಎಸ್ ಐಟಿ ನೋಟಿಸ್ ನೀಡಿದೆ.
2003ರಲ್ಲಿ ಧರ್ಮಸ್ಥಳದಲ್ಲಿ ಅನನ್ಯ ಭಟ್ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಅನನ್ಯ ಭಟ್ ಕಾಣೆಯಾಗಿದ್ದ ಬಗ್ಗೆ ದೂರು ಸಲ್ಲಿಕೆಯಾಗಿತ್ತು. ಇದೀಗ ವೈದ್ಯಕೀಯ ವಿದ್ಯಾರ್ಥಿಯಾಗಿದ್ದಂತ ಅನನ್ಯ ಭಟ್ ನಾಪತ್ತೆಯಾಗಿದ್ದರು. ಈ ಪ್ರಕರಣವನ್ನು ಎಸ್ಐಟಿಗೆ ರಾಜ್ಯ ಸರ್ಕಾರ ಹಸ್ತಾಂತರಿ ಅಧಿಕೃತ ಆದೇಶ ಮಾಡಿದೆ.

