
Read Time:50 Second
ಕಾರ್ಕಳ: ಹೆಂಡತಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಗಂಡ ಹೆಂಡತಿಯ ಮೈಯಿಂದ ರಕ್ತಬರುವುದನ್ನು ನೋಡಿ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟು ನಡಿಮತ್ತಾವು ಎಂಬಲ್ಲಿ ನಡೆದಿದೆ.


ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಸುರೇಖಾ (44) ಹಲ್ಲೆಗೊಳಗಾದ ಮಹಿಳೆ. ಕವರ ಮೇಲೆ ಗಂಡ ಗೋಪಾಲಕೃಷ್ಣ (60) ಕತ್ತಿಯಿಂದ ಹಲ್ಲೆ ಮಾಡಿದ್ದಾರೆ.
ನಂತರ ರಕ್ತ ಬರುವುದನ್ನು ನೋಡಿ ಹೆದರಿ ತನ್ನ ಮನೆಯ ತೋಟದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

