
Read Time:48 Second
ಮಂಗಳೂರು: ನಾಪತ್ತೆಯಾಗಿದ್ದ ಯುವಕನೋರ್ವನು ನಗರದ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ (24) ಎಂಬಾತ ಮೃತಪಟ್ಟ ಯುವಕ.


ಡಿಸೆಂಬರ್ 25ರಂದು ಸೂರ್ಯ ಏಕಾಏಕಿ ನಾಪತ್ತೆಯಾಗಿದ್ದ. ಆ ಬಳಿಕ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಆತ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ.
ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

