
ಬೆಳ್ತಂಗಡಿಯ ಬೊಳಿಯಾರುವಿನಲ್ಲಿ ಕಾಡಾನೆ ದಾಳಿಗೆ ಆಟೋ ರಿಕ್ಷಾ ನಜ್ಜುಗುಜ್ಜು
ಬೆಳ್ತಂಗಡಿ : ಕಾಡಾನೆ ದಾಳಿಗೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಧರ್ಮಸ್ಥಳದ ಬೊಳಿಯಾರು ಎಂಬಲ್ಲಿ ನಡೆದಿದೆ. ಬೊಳಿಯಾರು ನಿವಾಸಿ ದಿನೇಶ್ ಎಂಬವರು ತಮ್ಮ ಆಟೋರಿಕ್ಷಾದಲ್ಲಿ ಮುಂಜಾನೆ ತನ್ನ ಮನೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ವೇಳೆ ಮನೆಯ ಸಮೀಪವೇ ಕಾಡಾನೆಯೊಂದು ರಸ್ತೆ ಮಧ್ಯೆ ಎದುರಾಗಿದೆ. ಇದನ್ನು ಗಮನಿಸಿ ಆತಂಕಗೊಂಡ ದಿನೇಶ್, ರಿಕ್ಷಾವನ್ನು ಸ್ಥಳದಲ್ಲಿಯೇ ಬಿಟ್ಟು ಓಡಿ ತಪ್ಪಿಸಿಕೊಂಡಿದ್ದಾರೆ. ಈ ವೇಳೆ ಕಾಡಾನೆಯೊಂದು ರಿಕ್ಷಾದ ಮೇಲೆ ಎರಗಿ ರಿಕ್ಷಾವನ್ನು ನಜ್ಜುಗುಜ್ಜುಗೊಳಿಸಿ ಸಮೀಪದ ಚರಂಡಿಗೆ ತಳ್ಳಿ ಹಾಕಿದೆ. ಸ್ಥಳೀಯರು ಸ್ಥಳಕ್ಕೆ…