
ಯೋಗೀಶ್ ಗೌಡ ಕೊಲೆ ಕೇಸ್: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
ಬೆಂಗಳೂರು, ಜೂನ್ 13: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು (ಶುಕ್ರವಾರ) ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಅವರ ಜಾಮೀನನ್ನು ರದ್ದುಪಡಿಸಿ, ಒಂದು ವಾರದೊಳಗೆ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರಾಗಿದ್ದು, ಕೋರ್ಟ್ ಅವರನ್ನು ಸಿಬಿಐ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. 2016 ರ ಜೂ. 15 ರಂದು ಧಾರವಾಡ ತಾಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ…