
ಕರಾವಳಿ ಕರ್ನಾಟಕದಲ್ಲಿ ಮುಂಗಾರು ಆರ್ಭಟ: ಜೂನ್ 16 ರವರೆಗೆ ರೆಡ್ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ ವಿಸ್ತರಣೆ
ಮಂಗಳೂರು: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮುಂಗಾರು ಚುರುಕಾಗಿದ್ದು, ಗುರುವಾರ ವ್ಯಾಪಕ ಮತ್ತು ತೀವ್ರ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜೂನ್ 16 ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಪೂರ್ತಿ ಮಧ್ಯಂತರ ಮಳೆಯಾದ ವರದಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯ ಹಿನ್ನೆಲೆಯಲ್ಲಿ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿ ರಜೆ….