ಎನ್ಐಎ ತನಿಖೆಗೆ ಆದೇಶ: ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸಮಾಧಾನ
ಬಂಟ್ವಾಳ, ಜೂ. 09 : ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್ಐಎ…

