ಕರಾವಳಿ ಕರ್ನಾಟಕದಲ್ಲಿ ಮುಂಗಾರು ಆರ್ಭಟ: ಜೂನ್ 16 ರವರೆಗೆ ರೆಡ್ ಅಲರ್ಟ್ ಘೋಷಣೆ, ಶಾಲೆಗಳಿಗೆ ರಜೆ ವಿಸ್ತರಣೆ

ಮಂಗಳೂರು: ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮುಂಗಾರು ಚುರುಕಾಗಿದ್ದು, ಗುರುವಾರ ವ್ಯಾಪಕ ಮತ್ತು ತೀವ್ರ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜೂನ್ 16 ರವರೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಮುಂಬರುವ ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಪೂರ್ತಿ ಮಧ್ಯಂತರ ಮಳೆಯಾದ ವರದಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯ ಹಿನ್ನೆಲೆಯಲ್ಲಿ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಶುಕ್ರವಾರವೂ ಶಾಲೆಗಳಿ ರಜೆ….

Read More

ಮಂಗಳೂರಿನಲ್ಲಿ ಅಪಾಯಕಾರಿ ಬೈಕ್ ಸವಾರಿಗೆ ಬ್ರೇಕ್ ಹಾಕಿ: ಸಾರ್ವಜನಿಕರ ಆಗ್ರಹ

ಮಂಗಳೂರು, ಜೂ. 12 : ನಗರದಲ್ಲಿ ಅಪಾಯಕಾರಿ ಹಾಗೂ ಕಾನೂನುಬಾಹಿರ ಬೈಕ್ ಸವಾರಿಯ ಎರಡು ಘಟನೆಗಳು ಬೆಳಕಿಗೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಮೊದಲ ಘಟನೆ ಜೂನ್ 7 ರಂದು ಸಂಜೆ ಯೆನೆಪೋಯ (ದೇರಳಕಟ್ಟೆ)ಯಿಂದ ಕೆ.ಎಸ್. ಹೆಗ್ಡೆ ಮಾರ್ಗದಲ್ಲಿ ಸಂಭವಿಸಿದೆ. KA 19 HL 7316 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ನಾಲ್ವರು ಪ್ರಯಾಣಿಸುತ್ತಿರುವುದು ಕಂಡುಬಂದಿದೆ. ಇದು ಸಂಚಾರ ನಿಯಮದ ಉಲ್ಲಂಘನೆಯಾಗಿರುತ್ತದೆ. ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿರುವ ಯಾರೂ ಹೆಲ್ಮೆಟ್ ಧರಿಸಿರಲಿಲ್ಲ. ನಾಲ್ವರ ಈ…

Read More

ಮಂಗಳೂರಿನಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ಸಾಮೂಹಿಕ ವರ್ಗಾವಣೆ

ಮಂಗಳೂರು,: ನಗರದ ವಿವಿಧ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

Read More

ಕಡಬದ ತೋಟದಲ್ಲಿ ಅಕ್ರಮ ಅಂಕ: ನಗದು, ವಾಹನ, ಕೋಳಿಗಳ ವಶಕ್ಕೆ

ಕಡಬ: ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಕ್ಕೆ ಪಡೆದುಕೊಂಡು ಕಡಬ ಪೊಲೀಸ್ ಠಾಣೆಯಲ್ಲಿ…

Read More

ತ್ಯಾಜ್ಯದಿಂದ ಹೆದ್ದಾರಿ: ಮಂಗಳೂರಲ್ಲಿ ಪ್ಲಾಸ್ಟಿಕ್ ಬಳಸಿ ರಸ್ತೆ ನಿರ್ಮಾಣ ಯಶಸ್ವಿ

ಮಂಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಗ್ರಹಿಸಿದ 170 ಟನ್ ಪ್ಲಾಸ್ಟಿಕ್ ಕಸವನ್ನು ಸದ್ಬಳಕೆ ಮಾಡಿಕೊಂಡು, ಕರಾವಳಿಯಲ್ಲಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜಿಲ್ಲೆಯ ತಲಪಾಡಿಯಿಂದ ನಂತೂರುವರೆಗೆ ಹಾಗೂ ಸುರತ್ಕಲ್‌ನಿಂದ ಸಾಸ್ತಾನದವರೆಗೆ ಕಡಿಮೆ ಸಾಂದ್ರತೆಯ ಪಾಲಿಥಿಲೀನ್ (ಎಲ್‌ಡಿಪಿಇ) ಬಳಸಿ ನಿರ್ಮಿಸಿರುವ ಸರ್ವಿಸ್ ರಸ್ತೆ ಕಾಮಗಾರಿ ಮೇ ಅಂತ್ಯಕ್ಕೆ ಪೂರ್ಣಗೊಂಡಿದೆ. ಏನಿದು ಪ್ಲಾಸ್ಟಿಕ್ ರಸ್ತೆ?: ಅಧಿಕ ಮಳೆಯಾಗುವ ಪ್ರದೇಶದಲ್ಲಿ ಡಾಂಬರ್ ರಸ್ತೆಗಳಲ್ಲಿ ಬಹುಬೇಗ ಹೊಂಡಗಳು ನಿರ್ಮಾಣವಾಗುತ್ತವೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು…

Read More

ಕುಟುಂಬಕ್ಕೆ ಕಂಟಕವಾಗಿದ್ದ ಅಣ್ಣ; ಪೆಟ್ರೋಲ್ ಸುರಿದು ಕೊಂದ ತಮ್ಮ: ತಪ್ಪೊಪ್ಪಿಕೊಂಡ ಆರೋಪಿ!

ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ (42) ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಈತನ ಸಹೋದರ ನಿಂಗಪ್ಪ (21) ಕೃತ್ಯ ಎಸಗಿದ ಆರೋಪಿ. ಮೊದಲು ಕಡಬ ಪೊಲೀಸರ ವಶದಲ್ಲಿದ್ದ ಈತನನ್ನು ಜೂನ್ 8 ರಾತ್ರಿ ಮಂಗಳೂರು ವಿಭಾಗದ ರೈಲ್ವೇ…

Read More

ದಕ್ಷಿಣ ಕನ್ನಡದಲ್ಲಿ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಯತ್ನ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ತಮ್ಮನೇ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೋರಿಯಾರ್ ಸಮೀಪ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಗಾಯಾಳು ಹನುಮಪ್ಪ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಮೂಲದ ಅಣ್ಣ-ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ಭಾನುವಾರ ಮಧ್ಯಾಹ್ನ ಪ್ಯಾಸೆಂಜರ್ ರೈಲಿನಲ್ಲಿ ಆಗಮಿಸಿದ ಇವರು ಬಜಕರೆ ರೈಲು ನಿಲ್ದಾಣದಲ್ಲಿ ಇಳಿದಿದ್ದಾರೆ. ರೈಲು ಹೋದ ನಂತರ ಸುಮಾರು 500 ಮೀಟರ್ ದೂರದವರೆಗೂ ಅಣ್ಣನನ್ನು ಕರೆದುಕೊಂಡು ಹೋದ ತಮ್ಮ ನಿಂಗಪ್ಪ ಏಕಾಏಕಿ ಪೆಟ್ರೋಲ್…

Read More

ಕುಡುಪು ಗುಂಪು ಹತ್ಯೆ ಪ್ರಕರಣ: 3 ಆರೋಪಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು

ಮಂಗಳೂರು:ನಗರದ ಹೊರವಲಯದ ಕುಡುಪುವಿನಲ್ಲಿ 2025ರ ಎ.27ರಂದು ನಡೆದ ಅಶ್ರಫ್ ಗುಂಪು ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳಿಗೆ ಗುರುವಾರ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗುಂಪು ಹತ್ಯೆ ಪ್ರಕರಣದ 14ನೇ ಆರೋಪಿ ಸಂದೀಪ್, 15ನೇ ಆರೋಪಿ ದೀಕ್ಷಿತ್, 19ನೇ ಆರೋಪಿ ಸಚಿನ್ ಗೆ ಜಾಮೀನು ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ರಾಹುಲ್ ಮತ್ತು ಕೆ. ಸುಶಾಂತ್ ಗೆ ದಕ್ಷಿಣ ಕನ್ನಡ ಜಿಲ್ಲಾ ಎರಡನೇ ಹೆಚ್ಚುವರಿ ಜಿಲ್ಲಾ…

Read More

ಹಿಂದೂ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರ ದಾಳಿ

ಬಂಟ್ವಾಳ : ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಮನೆಗೆ ಪೊಲೀಸರು ನ್ಯಾಯಾಲಯದ ಆದೇಶದ ಜೊತೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಜಿಲ್ಲೆಯಿಂದ ಗಡಿಪಾರಿನ ಭೀತಿಯಲ್ಲಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಅವರ ಮನೆಗೆ ಪೊಲೀಸರು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲನೆ ಮಾಡಿದ್ದಾರೆ. ತನಿಖಾ ತಂಡವು ದಿನಾಂಕ : 04.06.2025 ರಂದು ಮಾನ್ಯ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಬಂಟ್ವಾಳ ಪುದು ಗ್ರಾಮದ ನಿವಾಸಿ ಭರತ್…

Read More

ಕರ್ನಾಟಕ ರಾಜ್ಯ ಕುಲಾಲ/ಕುಂಬಾರ ಸಮುದಾಯದ ಏಕೈಕ ನೋಂದಾಯಿತ ಸಂಸ್ಥೆಗೆ ನೂತನ ಶಕ್ತಿ

ಮಂಗಳೂರು :ಕರ್ನಾಟಕ ರಾಜ್ಯ ಕುಲಾಲರ /ಕುಂಬಾರರ ಯುವ ವೇದಿಕೆಗಳ ಹಾಗು ಮಹಿಳಾ ಸಂಘಟನೆಗಳ ಒಕ್ಕೂಟ ರಿ. ಮಂಗಳೂರು ಇದರ ರಾಜ್ಯ, ವಿಭಾಗ, ಜಿಲ್ಲೆ ಹಾಗೂ ವಿಧಾನಸಭಾ/ ತಾಲೂಕು ಘಟಕಗಳಿಗೆ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಚಾಲನೆ ಕೊಡುವಂತೆ ರಾಜ್ಯ, ವಿಭಾಗ ಹಾಗೂ ಜಿಲ್ಲಾ ನಾಯಕರುಗಳಿಗೆ ನೋಂದಾಯಿತ ಕೇಂದ್ರಸಮಿತಿಯಿಂದ ಅಧಿಕಾರ ಹಸ್ತಾಂತರ 15 ವರ್ಷಗಳ ಸೇವೆ ಸಲ್ಲಿಸಿದ ಬಳಿಕ ನೊಂದಾವಣೆ ಗೊಂಡು, 15 ವರ್ಷಗಳಲ್ಲಿ ಮಾಡಿದ ಸಮಾಜ ಮುಖೀ ಸೇವೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ…

Read More