
ಕಾರ್ಕಳದಲ್ಲಿ ಭೀಕರ ಅಪಘಾತ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ
ಕಾರ್ಕಳ: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ…