ಸುಹಾಸ್ ಶೆಟ್ಟಿ ಹತ್ಯೆ ತನಿಖೆ ಪ್ರಗತಿ: ಮತ್ತೊಬ್ಬ ಆರೋಪಿಯ ಬಂಧನ
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಬಂಧಿತ ವ್ಯಕ್ತಿಯ ಮೇಲೆ ಪ್ರಮುಖ ಆರೋಪಿಯೊಂದಿಗೆ ಕೊಲೆಗೆ ಸಂಚು ರೂಪಿಸಿದ ಮತ್ತು ಬಂಧನದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಆರೋಪವಿದೆ.ಬಂಧಿತನನ್ನು ಮಂಗಳೂರು ಬಜ್ಪೆ ಶಾಂತಿಗುಡ್ಡೆಯ ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ದಿವಂಗತ ಬಾವ ಅಬ್ದುಲ್ ರೆಹಮಾನ್ ಅವರ…

