
ನಂದಿನಿ ನದಿ ಮಾಲಿನ್ಯ: ಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ತ್ಯಾಜ್ಯದಿಂದ ಸುರತ್ಕಲ್ ಖಂಡಿಗೆ ಬಳಿ ನಂದಿನಿ ನದಿ ಮಲಿನವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು. ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು, ಸ್ಥಳೀಯರ ಅಹವಾಲು ಆಲಿಸಿದರು. ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ ಎಂದು ಸಾರ್ವಜನಿಕರು ತಿಳಿಸಿದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ನದಿ…