ಸುಬ್ರಹ್ಮಣ್ಯದಲ್ಲಿ ಕೊಠಡಿ ವಿಚಾರಕ್ಕೆ ಯುವಕನಿಗೆ ಹಲ್ಲೆ

ಸುಬ್ರಹ್ಮಣ್ಯ: ಕೊಠಡಿ ಬಾಡಿಗೆಗೆ ಪಡೆಯುವ ವಿಚಾರಕ್ಕೆ ಸಂಬಂಧಿಸಿ ಸುಬ್ರಹ್ಮಣ್ಯ ಆದಿ ಸುಬ್ರಹ್ಮಣ್ಯ ಪ್ರದೇಶದಲ್ಲಿ ಯುವಕನೋರ್ವನ ಮೇಲೆ ಹಲ್ಲೆ ನಡೆಸಲಾಗಿದ್ದು, ಕೃತ್ಯದ ವೀಡಿಯೋ ವೈರಲ್‌ ಆಗಿದೆ. ಯುವಕನೋರ್ವ ಕೊಠಡಿಯನ್ನು ವೀಕ್ಷಿಸಿದ ಬಳಿಕ ಅದನ್ನು ಪಡೆಯದೇ ತೆರಳಿದ ಕಾರಣಕ್ಕೆ ಕೊಠಡಿಯನ್ನು ನಿರ್ವಹಿಸುವ ತಂಡ ವಾಗ್ವಾದಕ್ಕಿಳಿಯಿತು. ಬಳಿಕ ಯುವಕನ ಮೇಲೆ ತಂಡದ ಓರ್ವ ಸದಸ್ಯ ಹಲ್ಲೆ ನಡೆಸಿದನು. ಸುಬ್ರಹ್ಮಣ್ಯದಲ್ಲಿ ಕೆಲವೆಡೆ ಹೊರಗಿನವರು ರೂಂಗಳನ್ನು ಲೀಸ್‌ಗೆ ಪಡೆದುಕೊಂಡು ಯಾತ್ರಿಕರಿಗೆ ಪೂರೈಸುವ ಕೆಲಸ ಮಾಡುತ್ತಿದ್ದು ಅವರು ಈ ಕೃತ್ಯ ಎಸಗಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ….

Read More