
ಮಂಗಳೂರಿನಲ್ಲಿ ಟಿಂಟೆಡ್ ಗ್ಲಾಸ್ ವಿರುದ್ಧ ವಿಶೇಷ ಪೊಲೀಸ್ ಕಾರ್ಯಾಚರಣೆ
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಟಿಂಟ್ ಗ್ಲಾಸ್ ಆಳವಡಿಸಿರುವ ಕಾರುಗಳ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಎರಡು ದಿನಗಳ ಅಂತರದಲ್ಲಿ 223 ಪ್ರಕರಣ ದಾಖಲಿಸಿ 1 ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 02-06-2025 ಮತ್ತು 03-06-2025 ರಂದು ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸ್ ಮತ್ತು ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಯವರು ವಿಶೇಷ ಜಂಟಿ ಕಾರ್ಯಾಚರಣೆ ನಡೆಸಿ ಕಾರಿನ ಗ್ಲಾಸ್ಗಳಲ್ಲಿ ಬ್ಲಾಕ್ ಫಿಲ್ಮ್(ಸನ್ ಫಿಲ್ಮ್) ಅಥವಾ ಟಿಂಟೆಡ್…