
Read Time:1 Minute, 5 Second
ಬಂಟ್ವಾಳ; ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ.ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಮೃತ ದುರ್ದೈವಿ.


ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಯಾಗಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.