ಬೆಳ್ತಂಗಡಿ: ಹಾಡಹಗಲೇ ಮನೆಯ ಬೀಗ ಮುರಿದು ಕಳ್ಳತನ..!!

0 0
Read Time:57 Second

ಬೆಳ್ತಂಗಡಿ: ಹಾಡಹಗಲೇ ಮನೆಯ ಬೀಗ ಮುರಿದು ಒಳನುಗ್ಗಿ ಸುಮಾರು ಹದಿಮೂರು ಲಕ್ಷ ಬೆಲೆಬಾಳುವ ಚಿನ್ನಾಭರಣ, ಹಣ ಕಳವು ಮಾಡಿ ಪರಾರಿಯಾದ ಘಟನೆ ಬೆಳ್ತಂಗಡಿಯ ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ನಡೆದಿದೆ.

ಮನೆಯ ಯಜಮಾನಿ ವಸಂತಿ ಹೆಗ್ಡೆ ಮತ್ತು ಅವರ ಮಗ-ಸೊಸೆ ಮನೆಗೆ ಬೀಗ ಹಾಕಿ ಬೆಳ್ತಂಗಡಿಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ಖದೀಮರು ಬೀಗ ಮುರಿದು ಮನೆಗೆ ನುಗ್ಗಿದ್ದಾರೆ.

ಮನೆಯ ಕೋಣೆಯ ಕಪಾಟಿನಲ್ಲಿಟ್ಟಿದ್ದ ಹದಿಮೂರು ಲಕ್ಷ, ಎಪ್ಪತ್ತು ಸಾವಿರ ಬೆಲೆಬಾಳುವ ಚಿನ್ನಾಭರಣ ಮತ್ತು ಮೂವತ್ತು ಸಾವಿರ ಹಣ ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *