
Read Time:1 Minute, 24 Second
ಉಳ್ಳಾಲ: ನಗರದ ಬೋಳಿಯಾರು ಎಂಬಲ್ಲಿ ಬಿಜೆಪಿ ವಿಜಯೋತ್ಸವದ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೂ ಮೊದಲು ಮಸೀದಿ ಮುಂಭಾಗ ನಡೆದ ಗಲಾಟೆಯ ದೃಶ್ಯ ಇದೀಗ ಲಭ್ಯವಾಗಿದೆ. ಮೋದಿಯವರು ಮೂರನೇ ಬಾರಿ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಹಿನ್ನಲೆಯಲ್ಲಿ ವಿಜಯೋತ್ಸವ ನಡೆದಿತ್ತು. ಅದರಂತೆ ಮಸೀದಿ ಮುಂದೆ ವಿಜಯೋತ್ಸವ ಮೆರವಣಿಗೆ ಸಾಗಿತ್ತು. ವಿಜಯೋತ್ಸವದ ಬಳಿಕ ಮಸೀದಿಯ ಬಳಿ ಬೈಕ್ ನಲ್ಲಿ ಬಂದ ಮೂವರು ಬಿಜೆಪಿ ಕಾರ್ಯಕರ್ತರು ‘ಬೋಲೋ ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ್ದಾರೆ. ಈ ವೇಳೆ ಮಸೀದಿ ಮುಂಭಾಗದಲ್ಲಿದ್ದ ಯುವಕರು ಅವರನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಅಲ್ಲಿಯೇ ಸ್ವಲ್ಪ ದೂರವಿರುವ ಬಾರ್ ಮುಂಭಾಗ ದಾಂಧಲೆ ನಡೆಸಿ ಇಬ್ಬರಿಗೆ ಚೂರಿಯಿಂದ ಇರಿದಿದ್ದಾರೆ. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಬೋಳಿಯಾರುವಿನಲ್ಲಿ ಮೂರು ಕೆಎಸ್ಆರ್ ಪಿ ತುಕಡಿ ಬೀಡುಬಿಟ್ಟಿದೆ.

