
Read Time:51 Second
ವಯನಾಡ್: ವಯನಾಡಿನಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರನ್ನು ಕೊಂದಿದ್ದ ನರಭಕ್ಷಕ ಹುಲಿ ಸೋಮವಾರ ಶವವಾಗಿ ಪತ್ತೆಯಾಗಿದೆ.



ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಹುಲಿಯ ಹೊಟ್ಟೆಯಲ್ಲಿ ಮಹಿಳೆಯ ಕೂದಲು, ಬಟ್ಟೆ ಹಾಗೂ ಕಿವಿ ಓಲೆ ಪತ್ತೆಯಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯದಂಚಿನಲ್ಲಿನ ಕಾಫಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಇತ್ತೀಚೆಗೆ ಹುಲಿ ದಾಳಿ ನಡೆಸಿತ್ತು.


ಹುಲಿಯ ಮೃತದೇಹ ಪಿಲಕಾವುವಿನ ಮನೆಯೊಂದರ ಹಿಂಭಾಗದಲ್ಲಿ ಪತ್ತೆಯಾಗಿದೆ. ಮೃತಪಟ್ಟ ಹುಲಿಗೆ 4-5 ವರ್ಷ ವಯಸ್ಸು ಇರಬಹುದೆಂದು ಅಂದಾಜಿಸಲಾಗಿದೆ.


