
Read Time:1 Minute, 20 Second
ತಿರುವನಂತಪುರ: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶೋರ್ನೂರ್ ಬಳಿ ಶನಿವಾರ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದು ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಗುತ್ತಿಗೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.


ಮಧ್ಯಾಹ್ನ 3 ಗಂಟೆ ಸುಮಾರಿಗೆ ತಿರುವನಂತಪುರಂ ಕಡೆಗೆ ಹೊರಟಿದ್ದ ಕೇರಳ ಎಕ್ಸ್‌ಪ್ರೆಸ್ ಕಸವನ್ನು ತೆರವುಗೊಳಿಸುತ್ತಿದ್ದ ನೈರ್ಮಲ್ಯ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಬಲಿಯಾದವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ.ಘಟನಾ ಸ್ಥಳದಿಂದ ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ನಾಲ್ಕನೆಯವರ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿದ್ದು, ಸಮೀಪದ ಭಾರತಪುಳ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.”ಅಪಘಾತಕ್ಕೆ ಕಾರಣವಾದ ರೈಲು ಸಮೀಪಿಸುತ್ತಿರುವುದನ್ನು ಕಾರ್ಮಿಕರು ಗಮನಿಸದೇ ಇರಬಹುದು, ಆದರೆ ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಶೋರ್ನೂರ್ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.