
Read Time:1 Minute, 9 Second
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.



ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.