‘HSRP’ ನಂಬರ್ ಪ್ಲೇಟ್ ಅಳವಡಿಸಲು ನಾಳೆ ಲಾಸ್ಟ್ ಡೇಟ್

0 0
Read Time:1 Minute, 53 Second

ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್ಪಿ) ಅಳವಡಿಸಲು (ಜೂನ್ 12) ನಾಳೆ ಕೊನೆಯ ದಿನಾಂಕವಾಗಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ಜೂನ್.

12 ರ ಒಳಗೆ ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲದಿದ್ದಲ್ಲಿ ಪೊಲೀಸರು 2000 ದಂಡ ವಿಧಿಸುತ್ತಾರೆ ಎಂದು ಹೇಳಲಾಗುತ್ತಿದೆ. ನೀವು HSRP ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಸಿದ್ರೆ ಅದರ ರಶೀದಿಯನ್ನು ಪೊಲೀಸರಿಗೆ ತೋರಿಸಿದ್ರೆ ನೀವು ದಂಡದಿಂದ ಬಚಾವ್ ಆಗಬಹುದಾಗಿದೆ. HSRP ನಂಬರ್ ಪ್ಲೇಟ್ ಗೆ ನೋಂದಣಿ ಮಾಡಿಕೊಂಡು ನಂಬರ್ ಪ್ಲೇಟ್ ಬರುವುದು ತಡವಾದರೆ ನೋಂದಣಿ ಮಾಡಿಸಿದ ರಶೀದಿಯನ್ನು ತೋರಿಸಿದರೆ ನೀವು ದಂಡದಿಂದ ರಿಯಾಯಿತಿ ಪಡೆಯಬಹುದು.

ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *